June 12, 2026

ಜುಲೈ 12ರಂದು ವಿಶ್ವಕರ್ಮರ ಜನ ಜಾಗೃತಿ ಜಿಲ್ಲಾ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ

ಕೊಪ್ಪಳ : ಅಖಿಲ ಕರ್ನಾಟಕ ವಿಶ್ವ ಕರ್ಮ ಮಹಾಸಭಾ ಜಿಲ್ಲಾ ವಿಶ್ವ ಕರ್ಮರ ಜನ ಜಾಗೃತಿ ಬೃಹತ್ ಸಮಾವೇಶ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ ವಿದ್ಯಾರ್ಥಿನಿಯರ ಪ್ರತಿಭಾ ಪುರಸ್ಕಾರ ಸಮಾರಂಭ ಬರುವ ತಿಂಗಳ ಜುಲೈ 12ರ ರವಿವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಶ್ರೀ ಶಿವಶಾಂತ ವೀರ ಮಂಗಲ ಭವನ ದಲ್ಲಿ ಜರುಗಲಿದೆ ಎಂದು ಮಹಾಸಭಾ ರಾಜ್ಯ ಉಪಾಧ್ಯಕ್ಷ ನಾಗಲಿಂಗಪ್ಪ ಪತ್ತಾರ್ ತಿಳಿಸಿದರು.

ಅವರು ಶುಕ್ರವಾರ ಇಲ್ಲಿನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಕಾರ್ಯಕರ್ಮದ ಸಂಪೂರ್ಣ ವಿವರಣೆ ನೀಡಿದ ಅವರು ಕಾರ್ಯಕ್ರಮ ದಲ್ಲಿ ನಮ್ಮ ಸಮಾಜದ ಹಿರಿಯ ಮುಖಂಡ ಮಹಾಸಭಾ ರಾಜ್ಯ ಅಧ್ಯಕ್ಷ ಮಾಜಿ ಶಾಸಕ ಕೆಪಿ ನಂಜುಂಡಿ ವಿಶ್ವಕರ್ಮ ಇವರು ಆಗಮಿಸಲಿದ್ದು ಅವರ ಸಾರಥ್ಯದಲ್ಲಿ ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ನಮ್ಮ ಸಮಾಜದ ಬೃಹತ್ ಸಮಾವೇಶ ಆಯೋಜನೆಗೊಂಡಿದೆ ಎಂದು ತಿಳಿಸಿದರು.

ಇದೇ ವೇಳೆ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಗಣನೀಯ ಸಾಧನೆ ಮಾಡಿದ ನಮ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಕೂಡ ನಡೆಯಲಿದೆ, ಪ್ರಸಕ್ತ ಸಾಲಿನಲ್ಲಿ ಶೇಕಡ 75ರಷ್ಟು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳು ಇದೇ ತಿಂಗಳ 30ನೇ ತಾರೀಕಿನ ಒಳಗಾಗಿ ತಮ್ಮ ಸಂಪೂರ್ಣ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಸಮಾಜದ ಶ್ರೀ ಗಳು , ಜನಪ್ರತಿನಿಧಿಗಳು ಸಮಾಜ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಳ್ಳುವವರು ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಘಟಕದ ಉಪಾಧ್ಯಕ್ಷರಾದ ನಾಗಲಿಂಗಪ್ಪ ಪತ್ತಾರ್ ಅವರು ಮಾಹಿತಿ ನೀಡಿದರು. ಹಾಗೂ ಸಮಾಜ ಬಾಂಧವರು ತಮ್ಮ ತಮ್ಮ ಮಕ್ಕಳ ಮತ್ತು ಕುಟುಂಬದೊಂದಿಗೆ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಕಟಣೆ ಮೂಲಕ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ವೀರೇಶ್ ಶರಣಪ್ಪ ಪತ್ತಾರ್, ಕೊಪ್ಪಳ ತಾಲೂಕ ಅಧ್ಯಕ್ಷ ಶ್ರೀನಿವಾಸ್ ಪಂಡಿತ್ ,ಕುಷ್ಟಗಿ ತಾಲೂಕ ಅಧ್ಯಕ್ಷ ವೀರೇಶ್ ಕಮ್ಮಾರ್ ,ಕಾರಟಗಿ ತಾಲೂಕ ಅಧ್ಯಕ್ಷ ಹನುಮೇಶ್ ಆಚಾರ್, ಹಾಗೂ ಮುಖಂಡರಾದ ಪ್ರಭಾಕರ್ ಬಡಿಗೇರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.